Thursday, June 4, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯದಲ್ಲಿ ಉರುಳು ಸೇವೆ ನಡೆಸಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕುಟುಂಬ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉರುಳು ಸೇವೆ ನಡೆಸಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕುಟುಂಬ

- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಇಂದು ಕುಟುಂಬ ಸಮೇತ ಭೇಟಿ ನೀಡಿದ್ದಾರೆ.ದೇವಸ್ಥಾನದಲ್ಲಿ ಈಶ್ವರಪ್ಪ ಅವರ ಪುತ್ರ ಮತ್ತು ಸೊಸೆ ಉರುಳು ಸೇವೆ ನಡೆಸಿದ್ದಾರೆ.

ಪುತ್ರ ಕೆ.ಇ. ಕಾಂತೇಶ್ ಮತ್ತು ಸೊಸೆ ಶಾಲಿನಿ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉರುಳು ಸೇವೆ ನಡೆಸಿದ್ದಾರೆ.ಉರುಳು ಸೇವೆ ಬಳಿಕ ಈಶ್ವರಪ್ಪ ಕುಟುಂಬ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು

ನಿನ್ನೆ ಚುನಾವಣಾ ಮತದಾನ ಮುಗಿದ ಬಳಿಕ ಇಂದು ಈಶ್ವರಪ್ಪ ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!