Thursday, June 4, 2026
Homeತಾಜಾ ಸುದ್ದಿಸಂತೋಷ್ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಮತ್ತೆ ಸಂಕಷ್ಟ

ಸಂತೋಷ್ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಮತ್ತೆ ಸಂಕಷ್ಟ

- Advertisement -
- Advertisement -

ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಪ್ರಭಾವಕ್ಕೆ ಒಳಗಾಗಿ ಸರಿಯಾದ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ವಿರುದ್ಧ ಮೃತ ಸಂತೋಷ್ ಸೋದರ ಸಂಬಂಧಿ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಪೂರ್ವಾಗ್ರಹ ಪೀಡಿತರಾಗಿ, ಪ್ರಭಾವಕ್ಕೊಳಗಾಗಿ ಪೊಲೀಸರು ತನಿಖೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಕೋರಿ  ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

- Advertisement -

Latest News

error: Content is protected !!