Thursday, June 4, 2026
Homeತಾಜಾ ಸುದ್ದಿಕರಾವಳಿಯಲ್ಲಿ ಇಎಸ್‌ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಬೇಕು: ಸದನದಲ್ಲಿ ಯು.ಟಿ.ಖಾದರ್ ಆಗ್ರಹ

ಕರಾವಳಿಯಲ್ಲಿ ಇಎಸ್‌ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಬೇಕು: ಸದನದಲ್ಲಿ ಯು.ಟಿ.ಖಾದರ್ ಆಗ್ರಹ

- Advertisement -
- Advertisement -

ಬೆಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಇಎಸ್‌ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸಬೇಕು ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಬೆಂಗಳೂರು ಹಾಗೂ ಕಲಬುರ್ಗಿಯಲ್ಲಿ ಇಎಸ್‌ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿವೆ. ಆದರೆ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಇಎಸ್‌ಐ ಆಸ್ಪತ್ರೆ ಇಲ್ಲ ಎಂದು ಗಮನ ಸೆಳೆದರು. ಕರಾವಳಿಯಲ್ಲೂ ಇಎಸ್‌ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸಿದ್ರೆ ಬಡಕೂಲಿ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

- Advertisement -

Latest News

error: Content is protected !!