Thursday, June 4, 2026
Homeಕರಾವಳಿಉಡುಪಿಕರಾವಳಿಗೆ ಸೋಲಾರ್ ಪಾರ್ಕ್: ಕೇಂದ್ರ ಸಚಿವ ಖೂಬರವರಿಗೆ ಪೇಜಾವರ ಶ್ರೀ ಪತ್ರ!

ಕರಾವಳಿಗೆ ಸೋಲಾರ್ ಪಾರ್ಕ್: ಕೇಂದ್ರ ಸಚಿವ ಖೂಬರವರಿಗೆ ಪೇಜಾವರ ಶ್ರೀ ಪತ್ರ!

- Advertisement -
- Advertisement -

ಉಡುಪಿ: ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿಯನ್ನು ಕೇಂದ್ರ ರಸಗೊಬ್ಬರ ರಾಸಾಯನಿಕ ಮತ್ತು ಇಂಧನ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ರವಿವಾರ ಭೇಟಿಯಾಗಿ ಗುರುವಂದನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ವಾಮೀಜಿ ಸಚಿವರೊಂದಿಗೆ ನವೀಕರಿಸಬಹುದಾದ ಇಂಧನಗಳ ಸಾಧ್ಯತೆಗಳ ಕುರಿತು ಸಮಾಲೋಚನೆ ನಡೆಸಿದ್ದು, ಗೋವಿನ ಸೆಗಣಿಯಿಂದ ವಿದ್ಯುತ್ ತಯಾರಿಸುವ ಬಗ್ಗೆ ಮಾತಾಡಿ, ದೇಶದಲ್ಲಿ ದೊಡ್ಡ ದೊಡ್ಡ ಗೋಶಾಲೆಗಳಲ್ಲಿ ಗೋಮಯದ ಹೇರಳ ಲಭ್ಯತೆಯನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳುವ ಬಗ್ಗೆ ಸರಕಾರದಿಂದ ವ್ಯವಸ್ಥೆ ಮಾಡಿದರೆ ಉತ್ತಮ ಎಂದರು.

ಖೂಬಾರವರು ಇತ್ತೀಚೆಗೆ ಬೀದರ್, ಕೊಪ್ಪಳ, ಬಾಗಲಕೋಟೆಗಳಲ್ಲಿ ಸೋಲಾರ್ ಪಾರ್ಕ್ ನಿರ್ಮಿಸುವ ಘೋಷಣೆ ಮಾಡಿದ ವಿಚಾರದ ಬಗ್ಗೆ ಸಂತಸ ವ್ಯಕ್ತಪಡಿಸಿದ ಸ್ವಾಮೀಜಿ, ಸೂರ್ಯಶಕ್ತಿ ಎಲ್ಲ ರೀತಿಯಿಂದಲೂ ಭವಿಷ್ಯಕ್ಕೆ ಅತ್ಯಂತ ಭರವಸೆಯ ಇಂಧನವಾಗಿದೆ. ಈ ಮೂರು ಜಿಲ್ಲೆಗಳ ಜೊತೆಗೆ ರಾಜ್ಯದ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಯಾವುದಾದರೂ ಒಂದು ಕಡೆ ಸೋಲಾರ್ ಪಾರ್ಕ್ ನಿರ್ಮಿಸಬೇಕೆಂದು ಅಪೇಕ್ಷಿಸಿ ಲಿಖಿತ ಪತ್ರವನ್ನು ಸಚಿವರಿಗೆ ನೀಡಿದರು. ಈ ಕುರಿತು ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರಕಾರದ ಜೊತೆ ಸಮಾಲೋಚಿಸಿ ತೀರ್ಮಾನಿಸುವುದಾಗಿ ಸಚಿವರು ಭರವಸೆ ನೀಡಿದರು.

- Advertisement -

Latest News

error: Content is protected !!