Wednesday, June 3, 2026
Homeಕರಾವಳಿಎತ್ತಿನಹೊಳೆ ಯೋಜನೆ-2021ರ ಜೂನ್ ಹೊತ್ತಿಗೆ ಮೊದಲ ಹಂತದ ಕಾಮಗಾರಿ ಸಂಪೂರ್ಣ

ಎತ್ತಿನಹೊಳೆ ಯೋಜನೆ-2021ರ ಜೂನ್ ಹೊತ್ತಿಗೆ ಮೊದಲ ಹಂತದ ಕಾಮಗಾರಿ ಸಂಪೂರ್ಣ

- Advertisement -
- Advertisement -

ಮಂಗಳೂರು: ಕರಾವಳಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಎತ್ತಿನಹೊಳೆ ಯೋಜನೆ ಕುರಿತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಹತ್ವದ ಮಾಹಿತಿ ನೀಡಿದ್ದಾರೆ. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿ 2021ರ ಜೂನ್ ಹೊತ್ತಿಗೆ ಮೊದಲ ಹಂತದ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಭೂಸ್ವಾಧೀನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಮುಂದಿನ ವರ್ಷದೊಳಗೆ ಮೊದಲಹಂತದ ಕಾಮಗಾರಿ ಸಂಪೂರ್ಣ ಗೊಳ್ಳಲಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಎತ್ತಿನಹೊಳೆ ಯೋಜನೆ ಆರಂಭಕಾಲದಲ್ಲಿ ಅವೈಜ್ಞಾನಿಕ ನದಿ ತಿರುವು ಯೋಜನೆ ಎಂಬ ಕಾರಣಕ್ಕೆ ಪರಿಸರ ವಾದಿಗಳ ಆಕ್ರೋಶಕ್ಕೆ ತುತ್ತಾಗಿತ್ತು. ಸಧ್ಯ ಈ ಭಾಗದ ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿದ್ದು ಯೋಜನೆ ಮುಕ್ತಾಯ ಕಾಣುವ ಲಕ್ಷಣ ಗೋಚರಿಸುತ್ತಿದೆ.

- Advertisement -

Latest News

error: Content is protected !!