Friday, June 5, 2026
Homeತಾಜಾ ಸುದ್ದಿಬಿಜೆಪಿಯನ್ನು ಸೋಲಿಸಲು ಎಲ್ಲದಕ್ಕೂ ಸಿದ್ಧ: ಕಾಂಗ್ರೆಸ್ ನಾಯಕರಿಗೆ ಇದಕ್ಕಿಂತ ಓಪನ್ ಆಫರ್ ಏನು ಕೊಡಲಿ? ಹೆಚ್‌ಡಿಕೆ

ಬಿಜೆಪಿಯನ್ನು ಸೋಲಿಸಲು ಎಲ್ಲದಕ್ಕೂ ಸಿದ್ಧ: ಕಾಂಗ್ರೆಸ್ ನಾಯಕರಿಗೆ ಇದಕ್ಕಿಂತ ಓಪನ್ ಆಫರ್ ಏನು ಕೊಡಲಿ? ಹೆಚ್‌ಡಿಕೆ

- Advertisement -
- Advertisement -

ಬೆಂಗಳೂರು: ರಾಜ್ಯಸಭೆ ಚುನಾವಣಾ ಕಣದಿಂದ ತಮ್ಮ ಪಕ್ಷದ  ಅಭ್ಯರ್ಥಿಯನ್ನು ಹಿಂದಕ್ಕೆ  ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ನವರು ಹೇಳಿದಕ್ಕೆಲ್ಲಾ ಒಪ್ಪಿಕೊಳ್ಳಬೇಕಾ?. ನಾವು 32 ಮಂದಿ ಶಾಸಕರು ಇದ್ದೇವೆ. ಕಾಂಗ್ರೆಸ್ ನವರು 25 ಶಾಸಕರಿದ್ದಾರೆ. ಯಾರ ಬಳಿ ಹೆಚ್ಚು ಮತಗಳು ಇವೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇವರ ದಬ್ಬಾಳಿಕೆಗೆಲ್ಲಾ ನಾವು ಬಗ್ಗಲು ಆಗುತ್ತಾ ಎಂದು ನೇರವಾಗಿ ಹೇಳಿದರು.

ನಮ್ಮ ಅಭ್ಯರ್ಥಿ ಚುನಾವಣಾ ಕಣದಿಂದ ಯಾಕೆ ಹಿಂದೆ ಸರಿಯುತ್ತಾರೆ? ಎಂದು ಪ್ರಶ್ನಿಸಿದ ಅವರು, ನಾವೇನು ಸಂಧಾನ ಮಾಡುತ್ತಿಲ್ಲ. ನನ್ನ ಬಳಿ ಯಾರು ಸಂಧಾನಕ್ಕೆ ಬಂದಿದ್ದಾರೆ ಅನ್ನೋದನ್ನು ಅವರು ಹೇಳಲಿ ಎಂದರು. ನಾವು ಮೊದಲು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ. ಇವರು ನಮ್ಮ ಜೊತೆ ಸಮಾಲೋಚನೆ ಮಾಡಿ ಅಭ್ಯರ್ಥಿ ಹಾಕಿದ್ದಾರಾ? ಬೆಂಬಲ ಕೊಡಿ ಅಂತಾ ನಮ್ಮ ಪಕ್ಷದ ಅಧ್ಯಕ್ಷರನ್ನು ಕೇಳಬಹುದಾಗಿತ್ತಲ್ಲವೇ? ಅವರು ಸಿ.ಎಂ.ಇಬ್ರಾಹಿಂ ಅವರಿಗೆ ಹಳೆಯ ಸ್ನೇಹಿತರು ಅಲ್ಲವೇ? ಒಂದು ಮಾತು ಅವರನ್ನು ಕೇಳಬಹುದಿತ್ತು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಂತ ಯಾವ ಪ್ರಯತ್ನವನ್ನು ಮಾಡದೇ ಈಗ ಅಭ್ಯರ್ಥಿಯನ್ನು ವಾಪಸ್ ತೆಗೆದುಕೊಳ್ಳಲಿ ಅಂತಾ ಹೇಳುವುದು  ಭಂಡತನ. ನಾವೇನು ಇವರ ಗುಲಾಮರಾ ಎಂದು ಕಿಡಿಕಾರಿದ ಕುಮಾರಸ್ವಾಮಿ ಬಿಜೆಪಿಯನ್ನು ಸೋಲಿಸಲು ಎಲ್ಲದಕ್ಕೂ ಸಿದ್ದನಿದ್ದೇನೆ. ಕಾಂಗ್ರೆಸ್ ನಾಯಕರಿಗೆ ಇದಕ್ಕಿಂತ ಓಪನ್ ಆಫರ್ ಏನು ಕೊಡಲಿ ಎಂದು ಪ್ರಶ್ನಿಸಿದ್ರು..

- Advertisement -

Latest News

error: Content is protected !!