- Advertisement -
- Advertisement -
ಮಂಗಳೂರು: ಚೈತ್ರಾ ಕುಂದಾಪುರ ಬಿಜೆಪಿ ಟಿಕೆಟ್ ಕೋಟಿ ಡೀಲ್ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ, ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಿ ಯಾರೇ ಇದ್ದರೂ ಬಂಧನ ಆಗಲಿ ಎಂದು ಹೇಳಿದ್ದಾರೆ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಹೇಳಿರುವ ಬೊಮ್ಮಾಯಿ, ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ ಬಂದಿದ್ದಾರೆ.
ಅಲ್ಲದೇ, ದೊಡ್ಡ ದೊಡ್ಡ ಹೆಸರುಗಳನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ, ಆದರೆ ತನಿಖೆ ಆಗಿ ಅದರ ಸತ್ಯಾಸತ್ಯತೆ ಹೊರಗೆ ಬರಲಿ ಎಂದು ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
- Advertisement -