Friday, June 5, 2026
Homeತಾಜಾ ಸುದ್ದಿಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಮೊಣಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಆಸ್ಪತ್ರೆಯಿಂದಲೇ ಅವರು ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಶೀಘ್ರದಲ್ಲಿ ಜನಸೇವೆಗೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.

ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ.ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

- Advertisement -

Latest News

error: Content is protected !!