- Advertisement -
- Advertisement -
ಬೆಂಗಳೂರು: ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ನಾಲ್ಕು ದಿನಗಳ ಹಿಂದೆ ಬಿಡದಿಯ ನಿವಾಸದಲ್ಲಿ ಕುಮಾರಸ್ವಾಮಿ ಅವರಿಗೆ ದೇಹದ ಎಡಭಾಗಕ್ಕೆ ಸ್ಟ್ರೋಕ್ ಆಗಿ ಬೆಳಗ್ಗಿನ ಜಾವ 3.30ಕ್ಕೆ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಆರಂಭದಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಿದ ಬಳಿಕ ಕುಮಾರಸ್ವಾಮಿ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದರು.
ಇಂದು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ ಮುಂದಿನ ಒಂದು ತಿಂಗಳು ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದಾರೆ.
- Advertisement -