Saturday, June 28, 2025
Homeತಾಜಾ ಸುದ್ದಿಎರಡು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಕೇಶುಭಾಯ್ ಪಟೇಲ್ ಇನ್ನಿಲ್ಲ !..

ಎರಡು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಕೇಶುಭಾಯ್ ಪಟೇಲ್ ಇನ್ನಿಲ್ಲ !..

spot_img
- Advertisement -
- Advertisement -

ಅಹ್ಮದಾಬಾದ್: ಗುಜರಾತ್‌ನ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್(92) ಸುದೀರ್ಘ ಕಾಲದ ಅನಾರೋಗ್ಯದ ಬಳಿಕ ನಿಧನರಾದರು. ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಎದೆನೋವಿನ ಕಾರಣದಿಂದ ಅವರನ್ನು ಅಹಮದಾಬಾದ್‌ನ ಸ್ಟರ್ಲಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

1995 ಮತ್ತು 1998-2001ರ ಅವಧಿಯಲ್ಲಿ ಅವರು ಎರಡು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಗುಜರಾತ್ ವಿಧಾನಸಭೆಗೆ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 2012ರಲ್ಲಿ ಬಿಜೆಪಿ ತೊರೆದು, ಗುಜರಾತ್ ಪರಿವರ್ತನ್ ಪಾರ್ಟಿ ಸ್ಥಾಪಿಸಿದ್ದರು. ಅವರ ಪಕ್ಷ 2012ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿತ್ತು.1960ರಲ್ಲಿ ಜನಸಂಘದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿ, ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ್ದರು. ಅವರ ಸಾವಿಗೆ ಹಲವು ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

- Advertisement -
spot_img

Latest News

error: Content is protected !!