Sunday, June 7, 2026
Homeತಾಜಾ ಸುದ್ದಿಮಾಜಿ ವಿದೇಶಾಂಗ ಸಚಿವ, ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ

ಮಾಜಿ ವಿದೇಶಾಂಗ ಸಚಿವ, ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ

- Advertisement -
- Advertisement -

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆ ಇಂದ ಬಳಲುತ್ತಿ ದ್ದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ(92) ಇಂದು ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಎಸ್. ಎಂ. ಕೃಷ್ಣ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಇದಾದ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು.

- Advertisement -

Latest News

error: Content is protected !!