Thursday, June 4, 2026
Homeಕೊಡಗುಬಾಂಬ್ ಹಾಕುವವರಿಗೆ ಕಾಂಗ್ರೆಸ್ ಕಾಲಘಟ್ಟ ಸ್ವರ್ಗ; ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಆರೋಪ

ಬಾಂಬ್ ಹಾಕುವವರಿಗೆ ಕಾಂಗ್ರೆಸ್ ಕಾಲಘಟ್ಟ ಸ್ವರ್ಗ; ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಆರೋಪ

- Advertisement -
- Advertisement -

ಮಡಿಕೇರಿ: ಭಯೋತ್ಪಾದಕರಿಗೆ ಮತ್ತು ಬಾಂಬ್ ಹಾಕುವವರಿಗೆ ಕಾಂಗ್ರೆಸ್ ಕಾಲಘಟ್ಟ ಸ್ವರ್ಗ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಜೈ ಶ್ರೀರಾಂ ಘೋಷಣೆ ಕುರಿತಾದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಶಾಲನಗರದಲ್ಲಿ ಪ್ರತಿಕ್ರಿಯಿಸಿದ ಸದಾನಂದ ಗೌಡ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತದೆ ಎಂದು ಆರೋಪಿಸಿದ್ದಾರೆ.

ಇವತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿರುವುದೇ ದುರ್ದೈವ ಎಂದು ಹೇಳಿರುವ ಡಿವಿಎಸ್, ಹಲ್ಲೆ ಪ್ರಕರಣವನ್ನು ಖಂಡಿಸಿದ್ದಾರೆ

ರಾಮನವಮಿ‌ ದಿನವಾದ ನಿನ್ನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಜೈ ಶ್ರೀರಾಂ ಘೋಷಣೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಹಿಂದೂ ಯುವಕರ ನಿವಾಸಕ್ಕೆ ರಾತ್ರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದರು.

- Advertisement -

Latest News

error: Content is protected !!