Sunday, June 7, 2026
Homeಕರಾವಳಿಉಡುಪಿಮಾಜಿ ಸಿಎಂ ಸಿದ್ದರಾಮಯ್ಯ ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ

ಮಾಜಿ ಸಿಎಂ ಸಿದ್ದರಾಮಯ್ಯ ಇಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ

- Advertisement -
- Advertisement -

ಮಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಇಂದು‌ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಬೆಳಗ್ಗೆ 10.40ಕ್ಕೆ ಬೆಂಗಳೂರಿನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿದ್ದರಾಮಯ್ಯ, ನೇರವಾಗಿ ಉಡುಪಿ ಜಿಲ್ಲೆಯ ಹಿರಿಯಡ್ಕಕ್ಕೆ ತೆರಳಿ ಭೂ ಮಸೂದೆ ಕಾಯಿದೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂತರ ಮಧ್ಯಾಹ್ನ 3 ಗಂಟೆಗೆ ಬಂಟ್ವಾಳಕ್ಕೆ ಆಗಮಿಸಿ ಕಾಂಗ್ರೆಸ್ ಕಾರ್ಯಕರ್ತರ ಭೇಟಿ ಮಾಡಲಿರುವ ಸಿದ್ದರಾಮಯ್ಯ, ಬಳಿಕ ಧರ್ಮಸ್ಥಳಕ್ಕೆ ತೆರಳಿ ಇತ್ತೀಚೆಗೆ ಹತ್ಯೆಗೊಳಗಾಗಿದ್ದ ದಲಿತ ಯುವಕ ದಿನೇಶ್ ‌ನಿವಾಸಕ್ಕೆ ಭೇಟಿ ನೀಡಲಿದ್ದಾರೆ.

ಸಂಜೆ 5.15ಕ್ಕೆ ಪುತ್ತೂರಿಗೆ ಆಗಮಿಸಲಿರುವ ಸಿದ್ದರಾಮಯ್ಯ ಕಂಬಳ ಉತ್ಸವದಲ್ಲಿ ಪಾಲ್ಗೊಂಡು ರಾತ್ರಿ 8.30ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಬಜರಂಗದಳ ಮುಖಂಡನಿಂದ ಧರ್ಮಸ್ಥಳದ ದಲಿತ ಯುವಕ ದಿನೇಶ್ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಪ್ರಕರಣ ಕಳೆದ ವಾರ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಧ್ವನಿಸಿತ್ತು.‌

- Advertisement -

Latest News

error: Content is protected !!