Sunday, October 18, 2026
Homeತಾಜಾ ಸುದ್ದಿದೇವೇಗೌಡರ ಕುಟುಂಬ ಕರ್ನಾಟಕ ತಲೆ ತಗ್ಗಿಸುವಂತೆ ಮಾಡಿದ್ದಾರೆ; ಮಾಜಿ ಸಿಎಂ ವೀರಪ್ಪ ಮೊಯಿಲಿ ಆರೋಪ

ದೇವೇಗೌಡರ ಕುಟುಂಬ ಕರ್ನಾಟಕ ತಲೆ ತಗ್ಗಿಸುವಂತೆ ಮಾಡಿದ್ದಾರೆ; ಮಾಜಿ ಸಿಎಂ ವೀರಪ್ಪ ಮೊಯಿಲಿ ಆರೋಪ

- Advertisement -
- Advertisement -

ಬೆಳಗಾವಿ: ದೇವೇಗೌಡರ ಕುಟುಂಬ ಸದಸ್ಯರು ಹಾಸನ ಮಾತ್ರವಲ್ಲ, ಕರ್ನಾಟಕದ ಹೆಸರನ್ನೂ ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಮೊಯಿಲಿ, ದೇವೇಗೌಡರ ಕುಟುಂಬ ರಾಜಕೀಯವನ್ನು ಕೆಡಿಸಿದ್ದಲ್ಲದೇ ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ಸ್ಕ್ಯಾಂಡಲ್‌ನ ಎಲ್ಲಾ ಸೂತ್ರದಾರರು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಲಗಿದ್ದಾರೆಯೇ ಎಂದು ವೀರಪ್ಪ ಮೊಯಿಲಿ ಪ್ರಶ್ನಿಸಿದ್ದಾರೆ.

ಅಲ್ಲದೇ, ದೇವೇಗೌಡರ ಕುಟುಂಬ ತಲೆ ತಗ್ಗಿಸಿದ್ದು, ಇಡೀ ಕುಟುಂಬ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಮೊಯಿಲಿ
ಪ್ರಜ್ವಲ್ ರೇವಣ್ಣ ಕರ್ನಾಟಕದಲ್ಲಿ ಇದ್ದಿದ್ದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಈ ಪ್ರಕರಣದಲ್ಲಿ ಸುಮ್ಮನೆ ಇರಬೇಕು ಆಗ ಮಾತ್ರ ಅವರೂ ಕೃತ್ಯವನ್ನು ಖಂಡಿಸಿದಂತೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!