Tuesday, July 14, 2026
Homeತಾಜಾ ಸುದ್ದಿಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ

- Advertisement -
- Advertisement -

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು‌.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಪುತ್ರ ಬಿ.ವೈ. ರಾಘವೇಂದ್ರ ಪರ ಚುನಾವಣಾ ಪ್ರಚಾರಕ್ಕಾಗಿ ಬೈಂದೂರಿಗೆ ಆಗಮಿಸಿದ್ದ ಯಡಿಯೂರಪ್ಪ ಪುತ್ರನ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮತ್ತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.‌

ಮೂಕಾಂಬಿಕಾ ದೇವರ ದರ್ಶನದ ಬಳಿಕ ಯಡಿಯೂರಪ್ಪ ಬೈಂದೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು.

- Advertisement -

Latest News

error: Content is protected !!