Friday, June 27, 2025
Homeಕರಾವಳಿಮಂಗಳೂರುಇಂದು ಮತ್ತು ನಾಳೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ; ಸುಳ್ಯದಲ್ಲಿ ಬಿಜೆಪಿ...

ಇಂದು ಮತ್ತು ನಾಳೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ; ಸುಳ್ಯದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ

spot_img
- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಇಂದು ಸಂಜೆ 6 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ, ನಾಳೆ ಬೆಳಗ್ಗೆ 7 ಗಂಟೆಗೆ ಮಂಜುನಾಥಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.

ನಾಳೆ ಬೆಳಗ್ಗೆ 9 ಗಂಟೆಗೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿರುವ ಯಡಿಯೂರಪ್ಪ, 10 ಗಂಟೆಗೆ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಸುಳ್ಯಕ್ಕೆ ತೆರಳಲಿರುವ ಯಡಿಯೂರಪ್ಪ 2 ಗಂಟೆಗೆ ಅಂಬಟೆಡ್ಕದಲ್ಲಿ ನಿರ್ಮಿಸಲಾಗಿರುವ ತಾಲೂಕು ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.

ನಂತರ ನಾಳೆ ಮಧ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಬಿ.ಎಸ್. ಯಡಿಯೂರಪ್ಪ ಸುಳ್ಯದಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

- Advertisement -
spot_img

Latest News

error: Content is protected !!