- Advertisement -
- Advertisement -
ಬೆಳಗಾವಿ:ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ತೆರಳುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿದೆ.ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಲಕ್ಷ್ಮಣ್ ಸವದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಥಣಿಯಿಂದ ಬೆಳಗಾವಿ ಹೋಗುವಾಗ ಕಾರು ಅಪಘಾತ ಸಂಭವಿಸಿದ್ದು, ಲಕ್ಷ್ಮಣ್ ಸವದಿ ಸೇರಿದಂತೆ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಾರು ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನಿಂದ ಲಕ್ಷ್ಮಣ ಸವದಿ, ಕಾರು ಚಾಲಕ ಹಾಗೂ ಗನ್ ಮ್ಯಾನ್ ಅವರನ್ನು ಹೊರಕ್ಕೆ ಕರೆತರಲಾಗಿದೆ.ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- Advertisement -