Saturday, June 6, 2026
Homeತಾಜಾ ಸುದ್ದಿಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ವಿಧಿವಶ

ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ವಿಧಿವಶ

- Advertisement -
- Advertisement -

ಬೆಂಗಳೂರು: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಎಂ.ರಘುಪತಿ ಅವರು ನಿಧನ ಹೊಂದಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಘುಪತಿ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊಂಚ ಚೇತರಿಸಿಕೊಂಡು ಮನೆಗೆ ಮರಳಿದ್ದ ಅವರು, ಇಂದು (ಶನಿವಾರ) ಬೆಳಗಿನ ಜಾವ 3 ಗಂಟೆಗೆ ಮಲ್ಲೇಶ್ವರದ ನಿವಾಸದಲ್ಲಿ ನಿಧನರಾಗಿದ್ದಾರೆ.


ಎಂ. ರಘುಪತಿ ಅವರು ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು.ಅಲ್ಲದೆ, ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.


ಎಂ.ರಘುಪತಿ ಅವರು ಶಿಕ್ಷಣ ಸಚಿವರಾಗಿದ್ದಾಗ ಮೊಟ್ಟ ಮೊದಲ ಬಾರಿಗೆ ಶಾಲಾ ಮಕ್ಕಳಿಗೆ ಸಮವಸ್ತ್ರನಿಯಮ ಜಾರಿಗೆ ತಂದರು ಎಂದು ತಿಳಿದು ಬಂದಿದೆ.ಮೃತರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

- Advertisement -

Latest News

error: Content is protected !!