- Advertisement -
- Advertisement -
ಬೈಂದೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿದ್ದಾರೆ.
ಇಂದು ಬೆಳಗ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಈಶ್ವರಪ್ಪ ಮೂಕಾಂಬಿಕಾ ದರ್ಶನ ಪಡೆದಿದ್ದಾರೆ.
ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿರುವ ಈಶ್ವರಪ್ಪ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದ ಬಳಿಕ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಕೆ.ಎಸ್. ಈಶ್ವರಪ್ಪ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಈಶ್ವರಪ್ಪ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.
- Advertisement -