Friday, June 27, 2025
Homeತಾಜಾ ಸುದ್ದಿಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ

spot_img
- Advertisement -
- Advertisement -

ಬೆಂಗಳೂರು : ಮಾಜಿ ಸಚಿವ ಮನೋಹರ್ ತಹಶೀಲ್ದಾರ್  (80) ಅನಾರೋಗ್ಯದಿಂದ ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.


ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದು, ಲೋಕಸಭೆ ಚುನಾವಣೆ ಸಮಯದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಹಾನಗಲ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಬಿಇ ಮೆಕ್ಯಾನಿಕಲ್ ಪದವೀಧರರಾಗಿದ್ದರು.

 ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಪಸಭಾಪತಿಯಾಗಿದ್ದರು. 1978 ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು 1989, 1999 ಮತ್ತು 2013ರಲ್ಲಿ ಗೆಲುವು ಸಾಧಿಸಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. 2015 ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು. ಇಂದು ಮಧ್ಯಾಹ್ನ ಹಾನಗಲ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಾಳೆ ಹುಟ್ಟೂರು ಅಕ್ಕಿವಳ್ಳಿಯ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎದು ಕುಟುಂಬದ ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!