Thursday, June 4, 2026
Homeಕರಾವಳಿಐವಾನ್ ಡಿಸೋಜಾಗೆ ಕೊರೊನಾ ಪಾಸಿಟಿವ್, ಮಾಜಿ ಸಚಿವ ಯು.ಟಿ.ಖಾದರ್ ಸ್ವಯಂ ಕ್ವಾರಂಟೈನ್

ಐವಾನ್ ಡಿಸೋಜಾಗೆ ಕೊರೊನಾ ಪಾಸಿಟಿವ್, ಮಾಜಿ ಸಚಿವ ಯು.ಟಿ.ಖಾದರ್ ಸ್ವಯಂ ಕ್ವಾರಂಟೈನ್

- Advertisement -
- Advertisement -

ಮಂಗಳೂರು  : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಾಂಗ್ರೆಸ್ ಮಾಜಿ ಶಾಸಕ ಐವಾನ್ ಡಿಸೋಜಾ ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರು ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಯು.ಟಿ.ಖಾದರ್, ಮಾಜಿ ಶಾಸಕ ಐವನ್ ಡಿಸೋಜಾ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ. ಇವರೆಲ್ಲರೂ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ಕೆಲ ದಿನಗಳಿಂದ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ‌ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲ‌ವು ದಿನಗಳ ಕಾಲ ಸ್ವಯಂ‌ ನಿರ್ಬಂಧ ಹಾಕಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಹೀಗಾಗಿ ಇಂದು ನಿಗದಿಯಾಗಿದ್ದ ಜನ ಸಮಾನ್ಯರ ಭೇಟಿ , ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆ , ಕ್ಷೇತ್ರದಲ್ಲಿ ‌ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ . ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ ‌ ಲಭ್ಯವಿದ್ದು ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನ ಎಂದಿನಂತೆ ಸಂಪರ್ಕಿಸಬಹುದಾಗಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!