Wednesday, May 8, 2024
Homeಪ್ರಮುಖ-ಸುದ್ದಿಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ ಸಿಸಿಬಿ ಪೊಲೀಸರು

spot_img
- Advertisement -
- Advertisement -

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ.ಬಿಜೆಪಿ ಮುಖಂಡ ಯೋಗೇಶ್ವರ್ ಕೊಲೆ ಪ್ರಕರಣದಲ್ಲಿ ಬೆಳಗ್ಗೆಯಿಂದ ಸತತ 9 ಗಂಟೆಗಳ ಕಾಲ ವಿನಯ್ ಅವರನ್ನು ವಶಕ್ಕೆ ಪಡೆದು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸದ್ಯ ಅವರನ್ನು ಬಂಧಿಸಿ ಕೊರೊನಾ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಬರಾಕೊಟ್ರಿಯಲ್ಲಿರುವ ಕುಲಕರ್ಣಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ 6 ಮಂದಿಯ ತಂಡ ಕುಲಕರ್ಣಿಯನ್ನು ವಶಕ್ಕೆ ಪಡೆದು, ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದಿತ್ತು. ವಿನಯ್ ಕುಲಕರ್ಣಿ ತನ್ನದೇ ವಾಹನದಲ್ಲಿ ಪೊಲೀಸ್ ಠಾಣೆಗೆ ಆಗಮಿಸಿದ್ದರು.

2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು.

- Advertisement -
spot_img

Latest News

error: Content is protected !!