Saturday, June 6, 2026
Homeಕರಾವಳಿಉಡುಪಿಅಮಾಸೆಬೈಲಿನಲ್ಲಿ ಮಾಜಿ ಶಾಸಕ ಎ.ಜಿ. ಕೊಡ್ಗಿ ಅಂತ್ಯಕ್ರಿಯೆ

ಅಮಾಸೆಬೈಲಿನಲ್ಲಿ ಮಾಜಿ ಶಾಸಕ ಎ.ಜಿ. ಕೊಡ್ಗಿ ಅಂತ್ಯಕ್ರಿಯೆ

- Advertisement -
- Advertisement -

ಉಡುಪಿ: ನಿನ್ನೆ ನಿಧನರಾದ ಮಾಜಿ ಶಾಸಕ ಎ.ಜಿ. ಕೊಡ್ಗಿ ಅವರ ಅಂತ್ಯ ಸಂಸ್ಕಾರ ಇಂದು ಅಮಾಸೆಬೈಲಿನಲ್ಲಿ
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು‌.

ಅಂತ್ಯಸಂಸ್ಕಾರಕ್ಕೂ ಮುನ್ನ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸಂಸದ ಬಿ.ವೈ. ರಾಘವೇಂದ್ರ ಸಹಿತ ಅನೇಕ ಗಣ್ಯರು ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದರು.

ಎರಡು ಬಾರಿ ಬೈಂದೂರು ಶಾಸಕರಾಗಿದ್ದ ಹಿರಿಯ ಬಿಜೆಪಿ ನಾಯಕರಾಗಿದ್ದ ಎ.ಜಿ. ಕೊಡ್ಗಿ ಅಲ್ಪಕಾಲದ ಅನಾರೋಗ್ಯದ ಬಳಿಕ ನಿನ್ನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

- Advertisement -

Latest News

error: Content is protected !!