Thursday, June 4, 2026
Homeಕರಾವಳಿಉಡುಪಿಡಿ.ಕೆ. ಸುರೇಶ್ ಗೆ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಗಾಗಿ ಕೊಲ್ಲೂರಿನಲ್ಲಿ ಪೂಜೆ

ಡಿ.ಕೆ. ಸುರೇಶ್ ಗೆ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಗಾಗಿ ಕೊಲ್ಲೂರಿನಲ್ಲಿ ಪೂಜೆ

- Advertisement -
- Advertisement -

ಉಡುಪಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ.‌ ಸುರೇಶ್ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಹೋಮ ಸಹಿತ ಪ್ರಾರ್ಥನೆ ನಡೆದಿದೆ.

ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ ಎಂ.ಸಿ. ಅಶ್ವಥ್ ನೇತೃತ್ವದಲ್ಲಿ ವಿಶೇಷ ಪೂಜೆ ಮತ್ತು ಹೋಮ ನಡೆದಿದ್ದು, ಡಿ.ಕೆ. ಸುರೇಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮೂಕಾಂಬಿಕಾ ದೇವಸ್ಥಾನದಲ್ಲಿ ಸರ್ವಾಲಂಕಾರ ಸೇವೆ ಮತ್ತು ಪೂಜೆ ಸಲ್ಲಿಸಲಾಗಿದ್ದು, ಡಿ.ಕೆ. ಸುರೇಶ್ ಅವರಿಗೆ ಟಿಕೆಟ್ ಸಿಗಬೇಕು ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ.

ಕುಟುಂಬ ಸಹಿತ ಹೋಮ ಕಾರ್ಯದಲ್ಲಿ ಭಾಗಿಯಾಗಿದ್ದ ಮಾಜಿ ಶಾಸಕ ಅಶ್ವಥ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಕ್ತಿ ಸಿಗಲು ಕೂಡಾ ಪ್ರಾರ್ಥನೆ ಸಲ್ಲಿಸಿದ್ದಾರೆ.

ನವೆಂಬರ್ 13 ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.

- Advertisement -

Latest News

error: Content is protected !!