Thursday, June 4, 2026
Homeಕರಾವಳಿಉಡುಪಿವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆ; ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ನಾಮಪತ್ರ ಸಲ್ಲಿ

ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆ; ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ನಾಮಪತ್ರ ಸಲ್ಲಿ

- Advertisement -
- Advertisement -

ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವುದಾಗಿ ಹೇಳಿಕೊಂಡಿರುವ ರಘುಪತಿ ಭಟ್, ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಮೈಸೂರು ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್ ಅವರಿಗೆ ಅಭ್ಯರ್ಥಿಯಾಗಿ ರಘುಪತಿ ಭಟ್ ನಾಮಪತ್ರ ಸಲ್ಲಿಸಿದ್ದಾರೆ

ನಾಮಪತ್ರ ಸಲ್ಲಿಕೆ ವೇಳೆ ಡಾ. ಶಿವಚರಣ್ ಶೆಟ್ಟಿ, ವಿಶ್ವನಾಥ್ ಭಟ್, ಚೇತನ್ ಮಂದಣ್ಣ ಮತ್ತು ಎಂ. ಶಂಕರ್ ಉಪಸ್ಥಿತರಿದ್ದರು.ನಾಮಪತ್ರ ಸಲ್ಲಿಕೆಗೂ ಮುನ್ನ ಬೆಂಬಲಿಗರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ರಘುಪತಿ ಭಟ್ ಚಾಮುಂಡೇಶ್ವರಿ ದರ್ಶನ ಪಡೆದರು

- Advertisement -

Latest News

error: Content is protected !!