Thursday, July 16, 2026
Homeಕರಾವಳಿಉಡುಪಿಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ

- Advertisement -
- Advertisement -

ಬೈಂದೂರು: ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಸಂಬಂಧ ಚರ್ಚೆ ನಡೆಸಿದ್ದಾರೆ.

ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಜೊತೆ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ್ದ ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಬಿ.ಎಂ. ಸುಕುಮಾರ ಶೆಟ್ಟಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ.

ಕಳೆದ ಅವಧಿಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿದ್ದ ಸುಕುಮಾರ ಶೆಟ್ಟಿ ಅವರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿತ್ತು‌‌. ಆ ಬಳಿಕ ಬಿಜೆಪಿ ಚಟುವಟಿಕೆಗಳಿಂದ ಸುಕುಮಾರ ಶೆಟ್ಟಿ ದೂರ ಉಳಿದಿದ್ದರು.

- Advertisement -

Latest News

error: Content is protected !!