Saturday, June 13, 2026
Homeತಾಜಾ ಸುದ್ದಿಕಾಂಗ್ರೆಸ್ ಪಕ್ಷಕ್ಕೆ‌ ಟಾಟಾ ಹೇಳಿದ ಮಾಜಿ‌ ಸಂಸದ: ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ...

ಕಾಂಗ್ರೆಸ್ ಪಕ್ಷಕ್ಕೆ‌ ಟಾಟಾ ಹೇಳಿದ ಮಾಜಿ‌ ಸಂಸದ: ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮುದ್ದಹನುಮೇಗೌಡ

- Advertisement -
- Advertisement -

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಟಾಟಾ ಹೇಳಿದ್ದಾರೆ. ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ರವಾನಿಸುವ ಮೂಲಕ, ಕಾಂಗ್ರೆಸ್  ಪಕ್ಷದಿಂದ ಹೊರ ಬಂದಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಪಕ್ಷ ಬಿಡಬೇಕಾದರೆ ನನ್ನ ಕಾರಣವಾಗಿರಬೇಕು ಇಲ್ಲವೇ ಪಕ್ಷದಿಂದ ಆಗಿರಬೇಕು. ಅದು ನನ್ನ ಕಡೆಯಿಂದ ಆಗಿದ್ದರೆ ಪಕ್ಷ ಸ್ಪಷ್ಟವಾಗಿ ಹೇಳಬೇಕು. ಒಂದು ರಾಷ್ಟ್ರೀಯ ಪಕ್ಷ ಬಿಡಲು ಬಲವಾದ ಕಾರಣದಿಂದ ಇರಬೇಕು ತಾನೇ.? ಎಂದು ಪ್ರಶ್ನಿಸಿದ್ದಾರೆ.

ನಾಯಕರನ್ನ ಭೇಟಿ ಮಾಡಿ ನನ್ನ ಸ್ಪಷ್ಟ ನಿರ್ಧಾರವನ್ನು ತಿಳಿಸಿದ್ದೇನೆ. 1989ರಲ್ಲಿ ಕಾಂಗ್ರೆಸ್ ಬಿ ಪಾರಂ ಕೊಟ್ಟು ನಂತರ ಬೇರೆಯವರಿಗೆ ಕೊಟ್ಟಿದ್ದರು. ನಂತರ 2019ರಲ್ಲಿ ಹಾಲಿ ಸಂಸದನಾಗಿದ್ರು ನಿಲ್ಲಲು ಅವಕಾಶ ಕೊಡಲಿಲ್ಲ. ನಾಲ್ಕು ಬಾರೀ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ನಾನು ಅತ್ಯಂತ ಕ್ರಿಯಾಶೀಲನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ಪಕ್ಷಕ್ಕೆ ನನ್ನದೇ ಆದ ಅಳಿಲು ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯು ಇದೆ. ನನ್ನ ಕ್ರಿಯಾಶೀಲ ರಾಜಕೀಯ ನಿಂತಿಲ್ಲ. ಪಕ್ಷಕ್ಕೆ ಕೂಡ ನನ್ನ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ.

- Advertisement -

Latest News

error: Content is protected !!