Thursday, June 27, 2024
Homeತಾಜಾ ಸುದ್ದಿಅಂತರಾಷ್ಟ್ರೀಯ ಯೋಗ ದಿನ ಹಿನ್ನೆಲೆ ಯೋಗ ಮಾಡಿ ಗಮನಸೆಳೆದ ಮಾಜಿ ಪ್ರಧಾನಿ ದೇವೇಗೌಡ

ಅಂತರಾಷ್ಟ್ರೀಯ ಯೋಗ ದಿನ ಹಿನ್ನೆಲೆ ಯೋಗ ಮಾಡಿ ಗಮನಸೆಳೆದ ಮಾಜಿ ಪ್ರಧಾನಿ ದೇವೇಗೌಡ

spot_img
- Advertisement -
- Advertisement -

ಬೆಂಗಳೂರು : ಇಂದು ಅಂತರರಾಷ್ಟ್ರೀಯ ಯೋಗ ದಿನವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆ  ಮಾಜಿ ಪ್ರಧಾನಿ ದೇವೇಗೌಡರು ತಮ್ಮ 91 ನೇ ವಯಸ್ಸಿನಲ್ಲೂ ಯೋಗ ಮಾಡಿ ಗಮನಸೆಳೆದಿದ್ದಾರೆ. ತಮ್ಮ ಇಳಿ ವಯಸ್ಸಿನಲ್ಲೂ  ಪ್ರಧಾನಿ ದೇವೇಗೌಡ ಅವರು ಕೂಡ ಯೋಗಾಸನ ಮಾಡಿದ್ದಾರೆ. 91 ನೇ ವಯಸ್ಸಿನಲ್ಲೂ ಅವರು ಇಷ್ಟೊಂದು ಆರೋಗ್ಯವಂತರಾಗಿರುವ ಗುಟ್ಟು ಅವರು ಪ್ರತಿದಿನ ಯೋಗ ಮಾಡೋದೇ. ಈ ವಯಸ್ಸಿನಲ್ಲೂ ಅವರು ಪ್ರತಿದಿನ ಯೋಗಾಸನ ಮಾಡುತ್ತಾರೆ.

ಇನ್ನು ಇಂದು ಪದ್ಮನಾಭ ನಗರದ ನಿವಾಸದಲ್ಲಿ ಯೋಗ ಅಭ್ಯಾಸ ಮಾಡಿದ್ದಾರೆ. ಅಲ್ಲದೇ ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, ಭಾರತೀಯ ಯೋಗಾಭ್ಯಾಸವು ದೈಹಿಕ ಆರೋಗ್ಯ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಕಾರಿಯಾಗಿದೆ.ಇದರಿಂದ ನಾನು 91 ವರ್ಷಗಳ ಕಾಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!