Wednesday, October 14, 2026
Homeಕರಾವಳಿಕುಕ್ಕೆ ಸುಬ್ರಮಣ್ಯಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ

ಕುಕ್ಕೆ ಸುಬ್ರಮಣ್ಯಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ

- Advertisement -
- Advertisement -

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಚನ್ನಮ್ಮ ದೇವೇಗೌಡ ದಂಪತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮೊನ್ನೆ ತಡರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ದೇವೇಗೌಡ ದಂಪತಿ ರಾತ್ರಿ ವಾಸ್ತವ್ಯ ಹೂಡಿ ನಿನ್ನೆ ತುಲಾಭಾರ ಸೇವೆ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮೊನ್ನೆ ಮಧ್ಯಾಹ್ನ ಹೆಲಿಕಾಫ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಬೇಕಿದ್ದ ದೇವೇಗೌಡ ದಂಪತಿ ಪ್ರತಿಕೂಲ ಹವಾಮಾನದ ಕಾರಣ ವಿಮಾನ ಮೂಲಕ ಮಂಗಳೂರಿಗೆ ಬಂದು ತಡರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾರೆ.

- Advertisement -

Latest News

error: Content is protected !!