Tuesday, May 7, 2024
Homeತಾಜಾ ಸುದ್ದಿನಾಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

ನಾಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

spot_img
- Advertisement -
- Advertisement -

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ನಾಳೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ನಾಳೆ ಮಧ್ಯಾಹ್ನ 2 ಗಂಟೆಗೆ ಪತ್ನಿ ಚನ್ನಮ್ಮ ಜೊತೆ ಬೆಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ತೆರಳಲಿರುವ ದೇವೇಗೌಡ, ಮಧ್ಯಾಹ್ನ 3.20 ಕ್ಕೆ ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲೆಯ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದಾರೆ.

ನಾಳೆ ಸಂಜೆ 6 ಗಂಟೆಗೆ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ದೇವೇಗೌಡ ನಾಳೆ ರಾತ್ರಿ ಸುಬ್ರಹ್ಮಣ್ಯದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಸೋಮವಾರ ಬೆಳಗ್ಗೆ ಕೂಡಾ ವಿಶೇಷ ಪೂಜೆ ಸಲ್ಲಿಸಲಿರುವ ದೇವೇಗೌಡ ದಂಪತಿ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

- Advertisement -
spot_img

Latest News

error: Content is protected !!