Wednesday, July 15, 2026
Homeತಾಜಾ ಸುದ್ದಿಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ: ಆಪ್ತ ಸಹಾಯಕ ಸಾವು

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ: ಆಪ್ತ ಸಹಾಯಕ ಸಾವು

- Advertisement -
- Advertisement -

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ವಜೀರಾಬಾದ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ, ಇಮ್ರಾನ್‌ ಖಾನ್‌ ಪ್ರಾಣಾಪಾಯದಿಂದ ಪಾರಾಗಿದ್ದು, ಇವರ ಆಪ್ತ ಸಹಾಯಕ ಸಾವನ್ನಪ್ಪಿದ್ದಾರೆ.  

ಇಂದು ಜಫರಾಲಿ ಖಾನ್ ಚೌಕ್‌ನಲ್ಲಿ ಘಟನೆ ನಡೆದಿದ್ದು, ಇಮ್ರಾನ್ ಖಾನ್ ಅವರು ರ‍್ಯಾಲಿಯ ವೇಳೆ ತೆರೆದ ಕಂಟೇನರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದೆ. ಬಳಿಕ ಇಮ್ರಾನ್‌ರನ್ನು ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಲಾಯಿತು.  ಘಟನೆಯ ಬಳಿಕ ಬಂದೂಕುಧಾರಿಯನ್ನು ಬಂಧಿಸಲಾಗಿದೆ.

- Advertisement -

Latest News

error: Content is protected !!