Thursday, June 4, 2026
Homeತಾಜಾ ಸುದ್ದಿರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್...

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್…

- Advertisement -
- Advertisement -

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತಿ ಘೋಷಣೆ ನಾಗುತ್ತೇನೆ ಎಂಬುದಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳುವ ಮೂಲಕ, ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ.

ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ನಡೆದಂತ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸ್ವೀಕರ್ ರಮೇಶ್ ಕುಮಾರ್, ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ಇಂದು ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ ಎಂಬುದಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದ ಅವರು, ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಹೋದ್ರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ರು. ಅಧಿಕಾರದಾಸೆಗೆ ಅನೈತಿಕ ರಾಜಕಾಣ ಮಾಡುತ್ತಿದ್ದಾರೆ ಎಂದ ಅವರು, ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂಬುದಾಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

- Advertisement -

Latest News

error: Content is protected !!