Sunday, June 7, 2026
Homeಕರಾವಳಿಮಂಗಳೂರು : ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ; ಪೋಷಕರ ಆಕ್ರೋಶ!

ಮಂಗಳೂರು : ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ; ಪೋಷಕರ ಆಕ್ರೋಶ!

- Advertisement -
- Advertisement -

ಮಂಗಳೂರು : ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ತಾಯಿಗೆ ಗಂಡು ಮಗು ನೀಡಿ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯ ಎಡವಟ್ಟು ಮಾಡಿದ್ದು, ಈ ಬಗ್ಗೆ ಪೋಷಕರು ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕುಂದಾಪುರದ ಮಹಿಳೆಯೋರ್ವರನ್ನು ಸೆಪ್ಟೆಂಬರ್ 27ರಂದು ತಡರಾತ್ರಿ 12 ಗಂಟೆಗೆ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಿಸಲಾಗಿತ್ತು. ಅವರಿಗೆ ಬಿಪಿ ಇದ್ದ ಕಾರಣ ಆಪರೇಷನ್ ಮಾಡಿ ಹೆರಿಗೆ ಮಾಡಿಸಲಾಗಿತ್ತು. ಈ ಸಂದರ್ಭ ಹೆಣ್ಣು ಮಗು ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದರು ಎಂದು ಮಗುವಿನ ತಂದೆ ಮುಸ್ತಫಾ ಹೇಳಿದ್ದಾರೆ.

ಬಳಿಕ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ 18 ದಿನಗಳ ಕಾಲ ಐಸಿಯು ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗಿತ್ತು. ಮಗುವಿನ ಆರೋಗ್ಯದ ಬಗ್ಗೆ ವೈದ್ಯರು ಸ್ಪಷ್ಟ ಮಾಹಿತಿ ನೀಡದ ಕಾರಣ ಮಗುವನ್ನು ಬೃಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಮಗು ಗಂಡು ಎಂದು ತಿಳಿದು ಬಂದಿದೆ. ನಂತರ ನಾವು ಮಗುವನ್ನು ಮತ್ತೆ ಲೇಡಿಗೋಶನ್ ಆಸ್ಪತ್ರೆಗೆ ಕರೆತಂದು ವೈದ್ಯಾಧಿಕಾರಿ ಬಳಿ ಈ ಕುರಿತು ಪ್ರಶ್ನಿಸಿದಾಗ ಈ ಮಗು ನಿಮ್ಮದೇ ಆಗಿದ್ದು, ನಮ್ಮ ದಾಖಲೆಯಲ್ಲಿ ತಪ್ಪಾಗಿ ನಮೂದಿಸಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿರುವುದಾಗಿ ಮುಸ್ತಫಾ ಅವರು ಮಾಹಿತಿ ನೀಡಿದ್ದಾರೆ.

ಇದರಿಂದ ಕುಪಿತರಾದ ಪೋಷಕರು ಮತ್ತೆ ಮಂಗಳೂರು ಆಸ್ಪತ್ರೆಗೆ ಕರೆ ತಂದಿದ್ದು, ಲೇಡಿಗೋಶನ್ ಆಸ್ಪತ್ರೆ ವೈದ್ಯರ ಸುಪರ್ದಿಗೆ ಒಪ್ಪಿಸಿದ್ದಾರೆ. ಅಲ್ಲದೇ, ಸ್ಥಳೀಯ ಸಾಮಾಜಿಕ ಕಾರ್ಯಕರ್ತರ ಬೆಂಬಲದೊಂದಿಗೆ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಂದರು ಪೊಲೀಸರು ಘಟನೆ ಕುರಿತು ಪರಿಶೀಲಿಸಿದ್ದಾರೆ. ಮಗುವಿನ ಡಿಎನ್ಎ ಪರೀಕ್ಷೆ ನಡೆಸಿ ನ್ಯಾಯ ಒದಗಿಸುವಂತೆ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!