Monday, June 8, 2026
Homeಕರಾವಳಿಬೆಳ್ತಂಗಡಿ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಕೆಥೋಲಿಕ್ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ!

ಬೆಳ್ತಂಗಡಿ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಕೆಥೋಲಿಕ್ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ!

- Advertisement -
- Advertisement -

ಬೆಳ್ತಂಗಡಿ:ಬೆಳ್ತಂಗಡಿ ಸಿರಿಯನ್ ಕೆಥೋಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಸಿ. (56) ಅವರು ಬುಧವಾರದಂದು ಕರ್ತವ್ಯದಲ್ಲಿದ್ದಾಗಲೇ ಕಚೇರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ .

ಮಧ್ಯಾಹ್ನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅಲ್ಲೇ ಸಮೀಪದಲ್ಲಿದ್ದ ಕ್ಲಿನಿಕ್ ನ ವೈದ್ಯರು ಪರೀಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಬೆಳ್ತಂಗಡಿ ಧರ್ಮ ಪಾಂತ್ರದ ಜ್ಞಾನ ನಿಲಯದ ಧರ್ಮೋಪದೇಶ ಕೇಂದ್ರದಲ್ಲಿ 10 ವರ್ಷ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಬಳಿಕ ಸಿರಿಯನ್ ಕೆಥೋಲಿಕ್ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ 11 ವರ್ಷಗಳಿಂದ ಕರ್ತವ್ಯದಲ್ಲಿದ್ದರು .ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!