Thursday, July 16, 2026
Homeತಾಜಾ ಸುದ್ದಿಅಬಕಾರಿ ಇಲಾಖೆ ಭ್ರಷ್ಟಾಚಾರ ವಿಧಾನಸಭೆಯಲ್ಲಿ ಚರ್ಚೆ; ಪೆನ್ ಡ್ರೈವ್ ಪ್ರದರ್ಶಿಸಿದ ವಿಪಕ್ಷ ನಾಯಕ ಅಶೋಕ್

ಅಬಕಾರಿ ಇಲಾಖೆ ಭ್ರಷ್ಟಾಚಾರ ವಿಧಾನಸಭೆಯಲ್ಲಿ ಚರ್ಚೆ; ಪೆನ್ ಡ್ರೈವ್ ಪ್ರದರ್ಶಿಸಿದ ವಿಪಕ್ಷ ನಾಯಕ ಅಶೋಕ್

- Advertisement -
- Advertisement -

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ಇಂದು ವಿಧಾನಸಭೆಯಲ್ಲಿ ಚರ್ಚೆಯಾಗಿದೆ.

ನಿಯಮ 69 ರಡಿ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಸದನದಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಆಡಿಯೋ ಇರುವ ಪೆನ್‌ಡ್ರೈವ್ ದಾಖಲೆಯನ್ನು ಪ್ರದರ್ಶನ ಮಾಡಿದ್ದಾರೆ.

ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಕಾಂಟ್ರಾಕ್ಟರ್‌ಗಳ ನಡುವೆ ನಡೆದಿರುವ ಆಡಿಯೋ ಸಂಭಾಷಣೆ ಇರುವ ಪೆನ್ ಡ್ರೈವ್ ಇದಾಗಿದ್ದು, ಸಚಿವ ಆರ್.ಬಿ. ತಿಮ್ಮಾಪುರ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ವಿಪಕ್ಷ ಬಿಜೆಪಿ ರಾಜೀನಾಮೆಗೆ ಒತ್ತಾಯಿಸಿದೆ.

ಸಿಎಲ್-7 ಸನ್ನದು ಪಡೆಯಲು ಅಬಕಾರಿ ಇಲಾಖೆ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪ ಮಾಡಿರುವ ಬಿಜೆಪಿ ನಾಯಕರು ಅಧಿಕಾರಿಗಳು ಜಾತಿ ರಾಜಕಾರಣ ಮಾಡಿರುವ ಬಗ್ಗೆಯೂ ಸದನದಲ್ಲಿ ಆರೋಪಿಸಿದ್ದಾರೆ.

- Advertisement -

Latest News

error: Content is protected !!