- Advertisement -
- Advertisement -
ಬೆಳ್ತಂಗಡಿ: ಕೊರೋನಾ ಮಹಾಮಾರಿಯ ವಿರುದ್ಧ ವೀರ ಯೋಧರಂತೆ ದುಡಿಯುತ್ತಿರುವ ಬೆಳ್ತಂಗಡಿ ಸಂಚಾರಿ ಠಾಣೆ ಸಿಬ್ಬಂದಿಗಳಿಗೆ ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಇಂದು ಫೇಸ್ ಶೀಲ್ಡ್ ಮಾಸ್ಕ್ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಬೆಳ್ತಂಗಡಿ ಸಂಚಾರಿ ಠಾಣೆ ಉಪನಿರೀಕ್ಷಕರಾದ ಶ್ರೀಮತಿ ಭಾರತಿ ಲಯನ್ಸ್ ಅಧ್ಯಕ್ಷರಾದ ಲಯನ್ ವಸಂತ್ ಶೆಟ್ಟಿ ಶ್ರದ್ಧಾ, ಕ್ಲಬ್ ಕಾರ್ಯದರ್ಶಿ ಸುರೇಶ ಶೆಟ್ಟಿ, ಸಂಚಾರಿ ಠಾಣೆಯ ಸಿಬ್ಬಂದಿಗಳಾದ ಶಶಿಧರ್, ನಾಗರಾಜ್, ಪ್ರಮೀಳಾ ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ
ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಇಂದು 12 ಅರ್ಹ ಕುಟುಂಬಗಳಿಗೆ ಅಕ್ಕಿ ವಿತರಿಸಲಾಯಿತು.
- Advertisement -