Tuesday, June 23, 2026
Homeತಾಜಾ ಸುದ್ದಿನಾನು 140 ಶಾಸಕರ ಅಧ್ಯಕ್ಷ; ಸಿಎಂಗೆ ಶುಭ ಹಾರೈಸುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

ನಾನು 140 ಶಾಸಕರ ಅಧ್ಯಕ್ಷ; ಸಿಎಂಗೆ ಶುಭ ಹಾರೈಸುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

- Advertisement -
- Advertisement -

ಬೆಂಗಳೂರು: ಬಣ ಮತ್ತು ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎರಡೂವರೆ ವರ್ಷದ ಬಳಿಕದ ಅಧಿಕಾರ ಹಸ್ತಾಂತರ ಒಪ್ಪಂದ ಎಂಬ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ನಾನು 140 ಶಾಸಕರ ಅಧ್ಯಕ್ಷ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದಿರುವ ಕಾರಣದಿಂದಾಗಿ ಸಚಿವ ಸ್ಥಾನದ ಅಕಾಂಕ್ಷಿಗಳು ದೆಹಲಿಗೆ ಹೋಗಿದ್ದಾರೆ ಎಂದು ಹೇಳಿರುವ ಡಿ.ಕೆ‌. ಶಿವಕುಮಾರ್, ಡಿನ್ನರ್ ರಾಜಕೀಯ ಹೊಸದಲ್ಲ, ಅದು ಎರಡೂವರೇ ವರ್ಷದಿಂದಲೂ ಇದೆ ಎಂದಿದ್ದಾರೆ.

ಇದೇ ವೇಳೆ ಐದು ವರ್ಷ ನಾನೇ ಸಿಎಂ ಎಂಬ ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಅವರಿಗೆ ಶುಭ ಹಾರೈಸುತ್ತೇನೆ, ಹೈಕಮಾಂಡ್ ಮಾತಿಗೆ ಸಿಎಂ ಮತ್ತು ನಾನು ಬದ್ಧ ಎಂದಿದ್ದೇವೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!