Sunday, June 7, 2026
Homeಕರಾವಳಿಉಡುಪಿಉಡುಪಿ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಟ್ಟ ಕಿಡಿಗೇಡಿಗಳು

ಉಡುಪಿ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಟ್ಟ ಕಿಡಿಗೇಡಿಗಳು

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರ ಹೆಸರಲ್ಲಿ ಕಿಡಿಗೇಡಿಗಳು ನಕಲಿ ವಾಟ್ಸಾಪ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಇನ್ನು ಈ ರೀತಿಯ ಮೆಸೆಜ್ ಬಂದರೆ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿರುವ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು, ನಕಲಿ ಖಾತೆಗಳನ್ನು ಸೃಜಿಸಿ ಹಣ ಕೇಳುತ್ತಿರುವ ಘಟನೆಗಳು ನಡೆಯುತ್ತಿದ್ದು, ಎಂದು ವಾಟ್ಸಾಪ್ ನಲ್ಲಿ ನಕಲಿ ಖಾತೆಯನ್ನು ಸೃಜಿಸಿ ಸಂದೇಶಗಳನ್ನು ಕಳುಹಿಸುತ್ತಿರುವುದು ಹಾಗೂ ಹಣ ಕೇಳುತ್ತಿರುವ ವಿಚಾರವು ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಣ ಕೇಳುವ ಸಂದೇಶಗಳು ಸ್ವೀಕೃತವಾದಲ್ಲಿ ಅದಕ್ಕೆ ಸ್ಪಂದಿಸದೇ ಕೂಡಲೇ ಅಗತ್ಯ ಮಾಹಿತಿಯೊಂದಿಗೆ ಸ್ಥಳೀಯ ಠಾಣಾಧಿಕಾರಿಯವರಿಗೆ ದೂರು ನೀಡುವಂತೆ ಹೇಳಿದ್ದಾರೆ.

- Advertisement -

Latest News

error: Content is protected !!