Friday, June 5, 2026
Homeತಾಜಾ ಸುದ್ದಿಖೋಟಾ ನೋಟು ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ  

ಖೋಟಾ ನೋಟು ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ  

- Advertisement -
- Advertisement -

ಬಂಟ್ವಾಳ; ಖೋಟಾ ನೋಟು ಪ್ರಕರಣದಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲಿಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಪುತ್ತೂರು ತಾಲೂಕಿನ ನೆಲ್ಯಾಡಿ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಇಬ್ರಾಹಿಂ (55) ಬಂಧಿತ ಆರೋಪಿ. 2004 ರಲ್ಲಿ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಪ್ರಕರಣ ದಾಖಲಾಗಿತ್ತು. ಇನ್ನೊಬ್ಬ ಆರೋಪಿ ಶರಣಾಗಿದ್ದು,  ಈತ ತಲೆಮರೆಸಿಕೊಂಡಿದ್ದ. ಇದೀಗ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ಮಾರ್ಗದರ್ಶನದಂತೆ ಸಿಬ್ಬಂದಿ ಗಣೇಶ್ ಮತ್ತು ಗೋಪಾಲಕೃಷ್ಣ ಅವರು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ. ಇದೀಗ ಆರೋಪಿಯನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ‌ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Latest News

error: Content is protected !!