ಉಡುಪಿ: ಇಲ್ಲಿನ ಮಣಿಪಾಲದ ಮಾಹೆ ರಿಜಿಸ್ಟ್ರಾರ್ ವಿಭಾಗಕ್ಕೆ ನಕಲಿ ಇಮೇಲ್ ಕಳುಹಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಹೆಸರಿನಲ್ಲಿ ಐಡಿ ಸೃಷ್ಟಿಸಿ ಇಮೇಲ್ ಕಳುಹಿಸಲಾಗಿದ್ದು, ಈ ಕುರಿತು ಮಣಿಪಾಲದ ಮಾಹೆ ನಿರ್ದೇಶಕ ಡಾ.ನಾರಾಯಣ ಸಭಾಯಿತ್ ಉಡುಪಿ ಸೆನ್‌ಠಾಣೆಗೆ ದೂರು ನೀಡಿದ್ದಾರೆ. ಕಚೇರಿಗೆ [email protected] ಎಂಬ ಖಾತೆಯಿಂದ ಇಮೇಲ್ ರವಾನೆಯಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಠಡಿ ಸಂಖ್ಯೆ 323 ‘ಎ’ ಮೂರನೇ ಮಹಡಿ, ವಿಧಾನಸೌಧ, ಬೆಂಗಳೂರು’ ಎಂದು ಸಂದೇಶದಲ್ಲಿ ನಮೂದಿಸಲಾಗಿದ್ದು, ಇಮೇಲ್ ನಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಸಂಸ್ಥೆಯು ಕಾಲೇಜುಗಳನ್ನು ಆರಂಭಿಸುತ್ತಿರುವ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಂದ ದೂರುಗಳು ಬಂದಿರುವ ಕುರಿತು ತಿಳಿಸಿ ಸದ್ಯದ ಪರಿಸ್ಥಿತಿಯಲ್ಲಿ ಕಾಲೇಜುಗಳನ್ನು ತೆರೆಯುವುದು ಸರಿಯಲ್ಲ. ಜ.1, 2021ರವರೆಗೆ ಕಾಲೇಜುಗಳನ್ನು ಆರಂಭಿಸಬಾರದು. ನಂತರದಲ್ಲಿ ತೆರೆಯಬೇಕಾದರೆ ಪೋಷಕರ ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯ ಪಡೆಯಬೇಕು ಎಂದು ಉಲ್ಲೇಖಿಸಿದೆ.