Saturday, May 18, 2024
Homeಕರಾವಳಿಉಡುಪಿಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿ!!

ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿ!!

spot_img
- Advertisement -
- Advertisement -

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಹೆಸರಿನಲ್ಲಿ ದುಷ್ಕರ್ಮಿಗಳು ಮೂರನೇ ಬಾರಿ ಫೇಸ್‌ಬುಕ್ ನ ನಕಲಿ ಖಾತೆಯನ್ನು ಸೃಷ್ಟಿಸಿದ್ದಾರೆ.

ಜು.17ರಂದು ಅಪರಿಚಿತ ವ್ಯಕ್ತಿಗಳು ಜಿಲ್ಲಾಧಿಕಾರಿ ಜಿ.ಜಗದೀಶ್ ಎಂಬ ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಟಿಸಿ, ಅದರ ಫ್ರೊಪೈಲ್ ಫೋಟೋಗೆ ಡಿಸಿಯ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ವೈಯಕ್ತಿಕ ಗೌರವಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಈ ಖಾತೆಯನ್ನು ತೆರೆದು ಹಣವನ್ನು ಕೇಳುತ್ತಿರುವ ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಸೆನ್ ಠಾಣೆಗೆ ದೂರು ನೀಡಲಾಗಿದೆ. ಇದೇ ರೀತಿ ಈ ಹಿಂದೆ ಎರಡು ಬಾರಿ ಇವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಠಿಸಿ ಅವರ ಆಪ್ತ ವಲಯದಲ್ಲಿ ಹಣ ಕೇಳಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!