Sunday, June 7, 2026
Homeಕರಾವಳಿಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ-ಕಿಡಿಗೇಡಿಗಳಿಂದ ವಂಚನೆ!

ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ-ಕಿಡಿಗೇಡಿಗಳಿಂದ ವಂಚನೆ!

- Advertisement -
- Advertisement -

ಬಂಟ್ವಾಳ:ಇಲ್ಲಿನ ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಕೃತ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುವುದಾಗಿ ದೇವದಾಸ್ ಶೆಟ್ಟಿ ತಿಳಿಸಿದ್ದಾರೆ.

ವಂಚಕನು ನಕಲಿ ಖಾತೆ ಮೂಲಕ ದೇವದಾಸ್ ಶೆಟ್ಟಿ ಅವರ ಸ್ನೇಹಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಹಣ ಗೂಗಲ್ ಪೇ, ಫೋನ್ ಪೇ ಅಥವಾ ಅಕೌಂಟಿಗೆ ಹಾಕಿ. ತಾನು ನಾಳೆ ಬೆಳಗ್ಗೆ 10 ಗಂಟೆಗೆ ಮತ್ತೆ ಮೆಸೇಜ್ ಮಾಡುತ್ತೇನೆ ಎಂದುಹೇಳಿದ್ದಾನೆ.

ಇದನ್ನು ನಂಬಿದ ಕೆಲವರು ಮೋಸ ಹೋಗಿದ್ದಾರೆ. ಈ ಪ್ರಕರಣದಲ್ಲಿ ದೇವದಾಸ ಶೆಟ್ಟಿಯವರು ಸೈಬರ್ ಕ್ರೈಂ ವಿಭಾಗಕ್ಕೆ ಈಗಾಗಲೇ ದೂರು ನೀಡುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!