Tuesday, May 7, 2024
Homeಅಪರಾಧನಕಲಿ ಫೇಸ್ ಬುಕ್ ಜಾಲಾ; ಮಂಗಳೂರಿನ ವ್ಯಕ್ತಿ ಸೌದಿಯಲ್ಲಿ ಬಂಧನ!

ನಕಲಿ ಫೇಸ್ ಬುಕ್ ಜಾಲಾ; ಮಂಗಳೂರಿನ ವ್ಯಕ್ತಿ ಸೌದಿಯಲ್ಲಿ ಬಂಧನ!

spot_img
- Advertisement -
- Advertisement -

ಮಂಗಳೂರು: ಸೌದಿ ಅರೇಬಿಯಾದಲ್ಲಿ ನೌಕರಿಯಲ್ಲಿದ್ದ ಮಂಗಳೂರಿನ ಬಿಕರ್ನಕಟ್ಟೆ ನಿವಾಸಿ ಶೈಲೇಶ್‌ ಕುಮಾರ್‌ ಅವರು ಸೌದಿ ಅರೇಬಿಯಾದ ದೊರೆ ಮತ್ತು ಇಸ್ಲಾಂ ವಿರುದ್ಧ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ ಎಂದು ಆರೋಪಿಸಿ ಕಳೆದ ಒಂದೂವರೆ ವರ್ಷದಿಂದ ಜೈಲಿನಲ್ಲಿಡಲಾಗಿದೆ.

ತಪ್ಪು ಮಾಡದ ವ್ಯಕ್ತಿ ನಕಲಿ ಫೇಸ್‌ಬುಕ್‌ ಜಾಲದಿಂದಾಗಿ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಧಾನಮಂತ್ರಿ, ಕೇಂದ್ರ ವಿದೇಶಾಂಗ ಇಲಾಖೆ ಮತ್ತು ರಾಜ್ಯ ಸರಕಾರ ಶೈಲೇಶ್‌ ಅವರನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

25 ವರ್ಷಗಳಿಂದ ಸೌದಿಯ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಶೈಲೇಶ್‌ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಅದರಲ್ಲಿ ಇಸ್ಲಾಂಗೆ ವಿರುದ್ಧವಾಗಿ ಮತ್ತು ಸೌದಿ ದೊರೆಗೆ ಅವಹೇಳನ ಮಾಡುವ ಪೋಸ್ಟ್‌ಗಳನ್ನು ಯಾರೋ ಹಾಕಿದ್ದರು. ಫೇಸ್‌ಬುಕ್‌ನಲ್ಲಿ ನಕಲಿ ಐಡಿ ಸೃಷ್ಟಿಸುವ ಕೆಲವು ದಿನಗಳ ಮೊದಲು ಅನಾಮಿಕ ವ್ಯಕ್ತಿಯೋರ್ವ ಕರೆ ಮಾಡಿ ನಿನ್ನ ಫೇಸ್‌ಬುಕ್‌ ಖಾತೆಯನ್ನು ಕೂಡಲೇ ಅಳಿಸಿ ಹಾಕಬೇಕು. ಇಲ್ಲವಾದಲ್ಲಿ ನಿನ್ನನ್ನು ಸೌದಿಯಲ್ಲಿ ಉಳಿಯಲು ಬಿಡುವುದಿಲ್ಲ. ಅಲ್ಲೇ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದ. ಬೆದರಿದ ಶೈಲೇಶ್‌ ಕೂಡಲೇ ತನ್ನ ಫೇಸ್‌ಬುಕ್‌ ಖಾತೆಯನ್ನು ಅಳಿಸಿ ಹಾಕಿದ್ದರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ನಕಲಿ ಖಾತೆ ಸೃಷ್ಟಿಯಾಗಿದೆ.

ಈ ಬಗ್ಗೆ ಅವರು ತಾನು ದುಡಿಯುತ್ತಿದ್ದ ಸಂಸ್ಥೆಯ ಎಚ್‌ಆರ್‌ ಮ್ಯಾನೇಜರ್‌ಗೆ ಮಾಹಿತಿ ನೀಡಿದ್ದಾರೆ. ಮ್ಯಾನೇಜರ್‌ ಸೂಚನೆಯಂತೆ ಸ್ಥಳೀಯ ಪೊಲೀಸರಿಗೆ ದೂರು ನೀಡಲು ತೆರಳಿದ ಶೈಲೇಶ್‌ ಅವರನ್ನೇ ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಸಂಬಂಧಿಕರು ಅಂತರ್ಜಾಲದ ಮೂಲಕ ಸೌದಿ ಅರೇಬಿಯಾದಲ್ಲಿರುವ ಇಂಡಿಯನ್‌ ಕಾನ್ಸುಲೇಟ್‌ಗೆ ದೂರು ನೀಡಿದ್ದರು. ಆದರೆ ಈ ದೂರು ಪಡೆದ ರಾಯಭಾರ ಕಚೇರಿ ಯಾವುದೇ ಕಾನೂನು ಕ್ರಮ ಜರಗಿಸಿಲ್ಲ ಎಂದು ಆರೋಪಿಸಿದರು.


ಭಾರತ ಸರಕಾರದ ವಿದೇಶಾಂಗ ಇಲಾಖೆ ಈ ಬಗ್ಗೆ ಗಮನ ಹರಿಸಿ ಶೈಲೇಶ್‌ರನ್ನು ಶೀಘ್ರ ಬಂಧಮುಕ್ತ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಬೇಕು. ನಕಲಿ ಫೇಸ್‌ಬುಕ್‌ ಖಾತೆಯನ್ನು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್‌ ಆಯುಕ್ತರು ವಿಶೇಷವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.ಶೈಲೇಶ್‌ ಅವರ ಪತ್ನಿ ಕವಿತಾ, ಸಂಬಂಧಿ ಅನುಷ್ಕಾ ಕೊಟ್ಟಾರಿ, ಶ್ರೇಯಸ್‌ ಪತ್ರಿಕಾಗೋಷ್ಠಿಯಲ್ಲಿದ್ದರು

- Advertisement -
spot_img

Latest News

error: Content is protected !!