Friday, June 27, 2025
Homeತಾಜಾ ಸುದ್ದಿಸಿದ್ದರಾಮಯ್ಯ ಹೆಸರಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಸೋನಿಯಾ ಗಾಂಧಿ ನಕಲಿ ಪತ್ರ ಬರೆದ ಆರೋಪ; ಸೋಷಿಯಲ್...

ಸಿದ್ದರಾಮಯ್ಯ ಹೆಸರಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಸೋನಿಯಾ ಗಾಂಧಿ ನಕಲಿ ಪತ್ರ ಬರೆದ ಆರೋಪ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಲೆಟರ್

spot_img
- Advertisement -
- Advertisement -

ಬೆಂಗಳೂರು; ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆಯಲಾಗಿದೆ ಎಂಬ ಪತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ‌ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ಖೊಟ್ಟಿ ಪತ್ರವನ್ನು ಹರಿಯಬಿಡಲಾಗಿದೆ. ಈ ಬಗ್ಗೆ ನಾನು ಪೋಲಿಸರಿಗೆ ದೂರು ನೀಡಲಿದ್ದು, ಈ ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುತ್ತಾರೆಂದು ನಂಬಿದ್ದೇನೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!