Saturday, October 17, 2026
Homeತಾಜಾ ಸುದ್ದಿಸಿದ್ದರಾಮಯ್ಯ ಹೆಸರಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಸೋನಿಯಾ ಗಾಂಧಿ ನಕಲಿ ಪತ್ರ ಬರೆದ ಆರೋಪ; ಸೋಷಿಯಲ್...

ಸಿದ್ದರಾಮಯ್ಯ ಹೆಸರಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಸೋನಿಯಾ ಗಾಂಧಿ ನಕಲಿ ಪತ್ರ ಬರೆದ ಆರೋಪ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಲೆಟರ್

- Advertisement -
- Advertisement -

ಬೆಂಗಳೂರು; ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆಯಲಾಗಿದೆ ಎಂಬ ಪತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ‌ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ಖೊಟ್ಟಿ ಪತ್ರವನ್ನು ಹರಿಯಬಿಡಲಾಗಿದೆ. ಈ ಬಗ್ಗೆ ನಾನು ಪೋಲಿಸರಿಗೆ ದೂರು ನೀಡಲಿದ್ದು, ಈ ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುತ್ತಾರೆಂದು ನಂಬಿದ್ದೇನೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!