ಬೆಳ್ತಂಗಡಿ : ಸರ್ಕಾರ ರಚನೆ ಮಾಡಿರುವ ಎಸ್ಐಟಿ ಯು ನಿಷ್ಪಕ್ಷಪಾತವಾಗಿ ತನಿಖೆಯನ್ನು ಮಾಡುತ್ತಿದ್ದು. ಈ ಸಂದರ್ಭದಲ್ಲಿ, ಶಾಸಕ ಹರೀಶ್ ಪೂಂಜಾ ಮತ್ತು ಅವರ ಬೆಂಬಲಿಗರಿಂದ ಸಾಮಾಜಿಕ ಜಾಲತಾಣದಲ್ಲಿ ನನ್ನ ಬಗ್ಗೆ ಸುಳ್ಳು ಸುದ್ದಿ ಹರಡುವ ಮೂಲಕ ಕುತಂತ್ರ ರಾಜಕಾರಣಕ್ಕೆ ಬೆಳ್ತಂಗಡಿ ಬಿಜೆಪಿ ಇಳಿದಂತಿದೆ.ವಿಚಾರ ಆಧಾರಿತವಾಗಿ ಬೆಳ್ತಂಗಡಿ ಬಿಜೆಪಿ ದಿವಾಳಿಯಾಗಿದೆ.

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷದ ಏಳಿಗೆ ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ಸಹಿಸಲಾಗದೆ, ಸುಳ್ಳು ಸುದ್ದಿಗಳನ್ನು ಹಬ್ಬುವ ಕಾಯಕ ಮಾಡಿ, ಸಾರ್ವಜನಿಕರನ್ನು ಗೊಂದಲಕ್ಕೆ ತಳ್ಳುವ ಪ್ರಯತ್ನ ಪಡುತ್ತಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆ.28 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಬೆಳ್ತಂಗಡಿ ತಾಲೂಕಿನ ಜನ ಪ್ರಜ್ಞಾವಂತರಿದ್ದಾರೆ,ಸುಳ್ಳು ಸುದ್ದಿಯನ್ನು ಹರಡುವ ಬೆಳ್ತಂಗಡಿಯ ಬಿಜೆಪಿಗೆ ಮುಂದಿನ ದಿನಗಳಲ್ಲಿ ಸರಿಯಾದ ಪಾಠವನ್ನು ಕಲಿಸಲಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


