Thursday, May 2, 2024
Homeಕರಾವಳಿಮುಸ್ಲಿಂರಿಗೆ ವ್ಯಾಪಾರಕ್ಕೆ ಅವಕಾಶ ನೀಡದ್ದಕ್ಕೆ ಪುತ್ತೂರು ಜಾತ್ರೆ ವೇಳೆ ಮಳೆ ಬಂದು ಹಾನಿ ಎಂದು ಅಪಪ್ರಚಾರ:...

ಮುಸ್ಲಿಂರಿಗೆ ವ್ಯಾಪಾರಕ್ಕೆ ಅವಕಾಶ ನೀಡದ್ದಕ್ಕೆ ಪುತ್ತೂರು ಜಾತ್ರೆ ವೇಳೆ ಮಳೆ ಬಂದು ಹಾನಿ ಎಂದು ಅಪಪ್ರಚಾರ: ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಪೊಲೀಸರಿಗೆ ದೂರು

spot_img
- Advertisement -
- Advertisement -

ಪುತ್ತೂರು: ಮಹಾಲಿಂಗೇಶ್ವರ ಜಾತ್ರೆಯ ವೇಳೆ ಈ ಬಾರಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಿರಲಿಲ್ಲ. ಅಲ್ಲದೇ ಈ ಬಾರಿ ಜಾತ್ರೆಯ ವೇಳೆ ಧಾರಾಕಾರ ಮಳೆಯಿಂದಾಗಿ ಜಾತ್ರೆ ಗದ್ದೆಯಲ್ಲಿ ಅಂಗಡಿ ಹಾಕಿದ್ದವರಿಗೂ ಸಾಕಷ್ಟು ನಷ್ಟವಾಗಿದೆ. ಇದೀಗ ಇದೇ ವಿಚಾರವನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಾ ಶಾಂತಿ ಕದಡುವ ಜೊತೆಗೆ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಲಾಗುತ್ತಿದೆ.

ಇದೀಗ ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪುತ್ತೂರು ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಕೆಲವರು ಸಮಾಜ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!