Monday, June 8, 2026
Homeತಾಜಾ ಸುದ್ದಿಮುಲ್ಕಿ: ಬಸ್ ನಿಲ್ದಾಣದಲ್ಲಿ ಮಲಗಿದ್ದಾಗ ಆಯತಪ್ಪಿ ಬಿದ್ದು ಯುವಕ ಸಾವು

ಮುಲ್ಕಿ: ಬಸ್ ನಿಲ್ದಾಣದಲ್ಲಿ ಮಲಗಿದ್ದಾಗ ಆಯತಪ್ಪಿ ಬಿದ್ದು ಯುವಕ ಸಾವು

- Advertisement -
- Advertisement -

ಮುಲ್ಕಿ: ಯುವಕನೊಬ್ಬ ಮಲಗಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಮುಲ್ಕಿಯ ಲಿಂಗಪ್ಪಯ್ಯಕಾಡಿನ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಲಿಂಗಪ್ಪಯ್ಯ ಕಾಡು ವಿಜಯಪುರ ಕಾಲನಿ ನಿವಾಸಿ ಮೂಲತಃ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ದಿಂಡವಾರ ಗ್ರಾಮದ ಲಕ್ಷ್ಮಣ್ಣ (23) ಮೃತಪಟ್ಟ ವ್ಯಕ್ತಿ.

ಈತ ಕೂಲಿ ಕೆಲಸ ಮಾಡುತ್ತಿದ್ದು ರಾತ್ರಿ ಊಟ ಮಾಡಿ ಬಸ್ ನಿಲ್ದಾಣದಲ್ಲಿ ಮಲಗಿದ್ದ. ಆಗ ದಂಡೆಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತ ಪಟ್ಟಿದ್ದಾನೆ. ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಭೀಮಾಶಂಕರ್, ವಿಠಲ್ ಎನ್.ಎಂ, ಶಿವಾನಂದ ಹಾಗೂ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತನ ಮಾವ ದಶರಥ ನೀಡಿದ ದೂರಿನಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!