Friday, June 14, 2024
Homeತಾಜಾ ಸುದ್ದಿಕನ್ನಡದ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ

ಕನ್ನಡದ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ

spot_img
- Advertisement -
- Advertisement -

ಬೆಂಗಳೂರು;ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತವಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

74 ವರ್ಷದ ಬ್ಯಾಂಕ್ ಜನಾರ್ದನ್​ಗೆ  ನಿನ್ನೆ ಹೃದಯಾಘಾತ ಉಂಟಾಗಿದೆ. ಸದ್ಯ ನಟ ಬ್ಯಾಂಕ್​ ಜನಾರ್ದನ್​ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ನಾಳೆ ಜನಾರ್ಧನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಾಧ್ಯತೆ ಇದೆ. ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್​ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.

ತಂದೆಯ ಆರೋಗ್ಯದ ಕುರಿತು ಮಾಹಿತಿ ನೀಡಿರುವ ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!