Thursday, June 4, 2026
Homeತಾಜಾ ಸುದ್ದಿಖ್ಯಾತ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

ಖ್ಯಾತ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: ಖ್ಯಾತ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಭಾನುವಾರದಂದು ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡು 10 ದಿನಗಳಾಗಿದೆ ಎನ್ನುವ ಮಾಹಿತಿ ಲಭಿಸಿದೆ.

ಗುರುಪ್ರಸಾದ್ ಅವರು ʼಮಠʼ ಸಿನಿಮಾದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು.

ಇನ್ನು ಭಾನುವಾರದಂದು ಗುರುಪ್ರಸಾದ್ ಅವರ ಅಪಾರ್ಟ್‌ ಮೆಂಟ್‌ ನಿಂದ ಕೊಳತೆ ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್‌ ಮೆಂಟ್‌ನಲ್ಲಿ ಸಾಲಗಾರರ ಕಿರುಕುಳದಿಂದ ಬೇಸತ್ತು ಫ್ಯಾನಿಗೆ ನೇಣುಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!